ಸಾರಾಂಶ
ಹನೂರು: ಹಿರಿಯ ರಾಜಕಾರಣಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಹನೂರು: ಹಿರಿಯ ರಾಜಕಾರಣಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಮುಖಂಡರು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರಾಗಿ ಸೇವೆ ಸಲ್ಲಿಸಿರುವ ಇವರು ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಮತ್ತು ದಲಿತ ಸಮುದಾಯದ ಉನ್ನತಿಗಾಗಿ ಹಲವು ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ದಲಿತರಿಗೆ ಯಾವುದೇ ಸಂದರ್ಭದಲ್ಲಿ ಅನ್ಯಾಯವಾದರೆ ಅಲ್ಲಿ ಅವರು ದ್ವನಿ ಎತ್ತುತ್ತಿದ್ದರು ಮತ್ತು ನ್ಯಾಯ ದೊರಕಿಸಿಕೊಡುತ್ತಿದ್ದರು. ಇಂತಹ ವ್ಯಕ್ತಿಯನ್ನು ಕಳೆದುಕೊಂಡ ದಲಿತ ಸಮುದಾಯ ಅನಾಥವಾಗಿದೆ ಎಂದರು.ಈ ಸಂದರ್ಭದಲ್ಲಿ ಯಜಮಾನರುಗಳಾದ ನಿಂಗರಾಜು, ಚಿಕ್ಕಣ್ಣ, ಸಿದ್ದರಾಜು, ಪಪಂ ಸದಸ್ಯ ಸಂಪತ್ ಕುಮಾರ್, ದಲಿತ ಮುಖಂಡರಾದ ಸಿದ್ದರಾಜು, ರವೀಂದ್ರ, ನಂಜಪ್ಪ, ಪುಟ್ಟರಾಜು, ಕಿರಣ್, ರಾಜೇಶ್, ಅಶೋಕ, ಮುಂತಾದವರು ಉಪಸ್ಥಿತರಿದ್ದರು.