ಖರ್ಗೆ ಹೆಸರಿಗೆ ಮಸಿ ಬಳಿಯಲು ಕುತಂತ್ರ: ಡಾ. ಮೇಟಿ

| Published : Sep 01 2024, 01:53 AM IST

ಸಾರಾಂಶ

Trick to smear the name of Kharge: Dr. matey

ಕನ್ನಡಪ್ರಭ ವಾರ್ತೆ ಯಾದಗಿರಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಟ್ರಸ್ಟಿಗೆ ಕಾನೂನು ನಿಯಮ ಪ್ರಕಾರವೇ ರಾಜ್ಯ ಸರ್ಕಾರ 5 ಎಕರೆ ಜಮೀನು ಮಂಜೂರಾತಿ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡು ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವಾರು ವರ್ಷಗಳಿಂದಲೂ ಸಹ ಖರ್ಗೆ ಅವರು ಪ್ರಾಮಾಣಿಕವಾಗಿ ರಾಜಕೀಯ ಮಾಡುತ್ತಲೇ ಬಂದಿದ್ದಾರೆ. ಆದರೆ, ಬಿಜೆಪಿ ನಾಯಕರಿಗೆ ಇದು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಅವರ ಹೆಸರಿಗೆ ಮಸಿ ಬಳಿಯುವಂತಹ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಖರ್ಗೆ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿರುವ ಬಿಜೆಪಿಗರು ಇದನ್ನು ಬಿಡಬೇಕು. ಇಲ್ಲದಿದ್ದರೇ ನಾಡಿನಲ್ಲಿ ಜನರೇ ಬಿಜೆಪಿ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಪ್ರಬಲವಾದ ನಾಯಕರ ಮೇಲೆ ವಿನಾಕಾರಣ ಆರೋಪ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ಧಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

------

31ವೈಡಿಆರ್4: ಡಾ. ಭೀಮಣ್ಣ ಮೇಟಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಯಾದಗಿರಿ.