ಸಿಂದಗಿ ಪುರಸಭೆಯಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ

| Published : Aug 16 2024, 12:58 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನವಾಗಿರುವ ಘಟನೆಯೊಂದು ಪಟ್ಟಣದ ಪುರಸಭೆ ಕಚೇರಿಯಲ್ಲಿ ನಡೆದಿದ್ದು, ಪಟ್ಟಣದ ಪುರಸಭೆ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಆದರೂ ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಸಿಂದಗಿ

ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನವಾಗಿರುವ ಘಟನೆಯೊಂದು ಪಟ್ಟಣದ ಪುರಸಭೆ ಕಚೇರಿಯಲ್ಲಿ ನಡೆದಿದ್ದು, ಪಟ್ಟಣದ ಪುರಸಭೆ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಆದರೂ ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ.

ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಸ್ಪಷ್ಟನೆ ನೀಡಿದ್ದು, ನನಗೆ ಆಲಮೇಲದ ಚಾರ್ಜ್ ಸಹ ಇದೆ. ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ, ನಮ್ಮ ಕಚೇರಿ ಸುತ್ತಮುತ್ತ ಅಂಗಡಿಗಳಿದ್ದು, ಮೇಲೆ ಹತ್ತಲು ಅವಕಾಶವಿದೆ. ಯಾರಾದರೂ ಕಿಡಿಗೇಡಿಗಳು ನನಗೆ ಮಸಿ ಬಳಿಯುವ ಸಲುವಾಗಿ ಇಳಿಸುವ ಸಂದರ್ಭದಲ್ಲಿ ಈ ರೀತಿ ಮಾಡಿರಬಹುದು. ಇದರ ಸಲುವಾಗಿಯೇ ಸಿಬ್ಬಂದಿ ನೇಮಿಸಿದ್ದೆ. ಅವರ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಹೇಳಿದ್ದಾರೆ.