ಸಾರಾಂಶ
ಹಿರೆಮಂದೆ ಗ್ರಾಮದಲ್ಲಿ ಅಕ್ರಮವಾಗಿ ಕಾಡುಜಾತಿಯ ಸೌದೆ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದರೆ, ಗುರುವಾರ ರಾತ್ರಿ ಹಿರಿಯ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಂತೆ ಹೆತ್ತೂರಿನಿಂದ ಸಕಲೇಶಪುರದೆಡೆಗೆ ಮರದ ದಿಮ್ಮಿಗಳನ್ನು ಹೊತ್ತು ಸಾಗುತ್ತಿದ್ದ ವಾಹನವನ್ನು ತಾಲೂಕಿನ ಆನೇಮಹಲ್ ಗ್ರಾಮ ಸಮೀಪ ತಡೆದು ಪರಿಶೀಲಿಸಿದ ವೇಳೆ ಅಕ್ರಮ ಬಯಲಿಗೆ ಬಂದಿದೆ. ಚಾಲಕನನ್ನು ವಶಕ್ಕೆ ಪಡೆದು ದೂರು ವಾಹನವನ್ನು ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ಅರ್ಜುನ್, ಮಂಜುನಾಥ್, ಅರಣ್ಯ ಪಾಲಕರಾದ ಉಮೇಶ್, ಯೋಗೇಶ್ ಮುಂತಾದವರು ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಪ್ರತ್ಯೇಕ ಪ್ರಕರಣಗಳಲ್ಲಿ ಸಕಲೇಶಪುರ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮರ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.ಗುರುವಾರ ತಾಲೂಕಿನ ಹಿರೆಮಂದೆ ಗ್ರಾಮದಲ್ಲಿ ಅಕ್ರಮವಾಗಿ ಕಾಡುಜಾತಿಯ ಸೌದೆ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದರೆ, ಗುರುವಾರ ರಾತ್ರಿ ಹಿರಿಯ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಂತೆ ಹೆತ್ತೂರಿನಿಂದ ಸಕಲೇಶಪುರದೆಡೆಗೆ ಮರದ ದಿಮ್ಮಿಗಳನ್ನು ಹೊತ್ತು ಸಾಗುತ್ತಿದ್ದ ವಾಹನವನ್ನು ತಾಲೂಕಿನ ಆನೇಮಹಲ್ ಗ್ರಾಮ ಸಮೀಪ ತಡೆದು ಪರಿಶೀಲಿಸಿದ ವೇಳೆ ಅಕ್ರಮ ಬಯಲಿಗೆ ಬಂದಿದೆ. ಚಾಲಕನನ್ನು ವಶಕ್ಕೆ ಪಡೆದು ದೂರು ವಾಹನವನ್ನು ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ಅರ್ಜುನ್, ಮಂಜುನಾಥ್, ಅರಣ್ಯ ಪಾಲಕರಾದ ಉಮೇಶ್, ಯೋಗೇಶ್ ಮುಂತಾದವರು ವಹಿಸಿದ್ದರು.
;Resize=(128,128))
;Resize=(128,128))
;Resize=(128,128))