ಸಮಸ್ಯೆ ಹೇಳಿದರೆ ನ್ಯಾಯ ಒದಗಿಸಲು ಪ್ರಯತ್ನ

| Published : Dec 03 2024, 12:35 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಪಿಲ್ಲರ್‌ ಇದ್ದಂತೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ವಾರ್ಡ್‌ಗಳ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಅಂದಾಗ ಜನರ ಪ್ರಶಂಸೆಗೆ ಪಾತ್ರರಾಗುತ್ತೀರಿ. ತಮ್ಮ ಆಡಳಿತಾತ್ಮಕ ಯಾವುದೇ ಸಮಸ್ಯೆಗಳಿರಲಿ ನಮ್ಮ ಗಮನಕ್ಕೆ ತಂದರೆ ವಿಪ ಸದಸ್ಯ ಸುನೀಲಗೌಡ ಪಾಟೀಲರು ಮತ್ತು ನಾನು ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಸ್ಥಳೀಯ ಸಂಸ್ಥೆಗಳು ಸಂವಿಧಾನದ ಪಿಲ್ಲರ್‌ ಇದ್ದಂತೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ವಾರ್ಡ್‌ಗಳ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಅಂದಾಗ ಜನರ ಪ್ರಶಂಸೆಗೆ ಪಾತ್ರರಾಗುತ್ತೀರಿ. ತಮ್ಮ ಆಡಳಿತಾತ್ಮಕ ಯಾವುದೇ ಸಮಸ್ಯೆಗಳಿರಲಿ ನಮ್ಮ ಗಮನಕ್ಕೆ ತಂದರೆ ವಿಪ ಸದಸ್ಯ ಸುನೀಲಗೌಡ ಪಾಟೀಲರು ಮತ್ತು ನಾನು ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಪಟ್ಟಣದ ಎಪಿಎಂಸಿ ಬಡಾವಣೆಯ ಕರ್ನಾಟಕ ಬ್ಯಾಂಕ್ ಮಂಗಲ ಭವನದಲ್ಲಿ ಜಿಪಂ ಹಾಗೂ ತಾಪಂ ಸಹಯೋಗದಲ್ಲಿ ವಿಪ ಸದಸ್ಯ ಸುನೀಲಗೌಡ ಪಾಟೀಲ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಆಡಳಿತಾತ್ಮಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು 1989ರಲ್ಲಿ ಮಣಿಶಂಕರ ಅಯ್ಯರ ಅವರ ಸಮಿತಿ ಸದಸ್ಯನಾಗಿದ್ದೆ ಎಂಬುದು ನನಗೆ ಹೆಮ್ಮೆ. 1999ರಲ್ಲಿ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದರು. ಪಂಚಾಯತ್ ರಾಜ್‌ ವ್ಯವಸ್ಥೆಯನ್ನು ಕೈಗೊಳ್ಳಲು ಸ್ತ್ರೀ ಶಕ್ತಿ ಸಂಘಟನೆ ಮಾಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಯೋಜನೆ ಜಾರಿಗೆ ತಂದರು ಎಂದರು.

ಗ್ರಾಮಸಭೆಗಳ ಮೂಲಕ ಬಡವರಿಗೆ ಮನೆ ಹಂಚಿಕೆ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಗ್ರಾಮಗಳಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಂಪೂರ್ಣ ಅಧಿಕಾರ ಸ್ಥಳೀಯ ಸಂಸ್ಥೆಯ ಸದಸ್ಯರು ಹಾಗೂ ಅಧಿಕಾರಿಗಳ ಮೇಲಿರುತ್ತದೆ. ಇದಕ್ಕೆ ಶಾಸಕರು ಜವಾಬ್ದಾರಿ ಇರಲ್ಲ. ಶಾಸಕರು ಇಡೀ ಮತಕ್ಷೇತ್ರಲ್ಲಿನ ಸ್ಥಳೀಯ ಸಂಸ್ಥೆಗಳ ಮೂಲಕ ಗ್ರಾಮ, ಪಟ್ಟಣಗಳಿಗೆ ಏನೆಲ್ಲ ಅಭಿವೃದ್ಧಿ ಮಾಡಲು ಸಾಧ್ಯ ಎಂಬುದನ್ನು ತಿಳಿಸಿದರೆ ನಾವು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯ. ಆದರೆ, ಎಲ್ಲವನ್ನು ಶಾಸಕರೇ ಮಾಡಬೇಕು ಎಂಬ ಭಾವನೆಯಿಂದ ಜನರು ಹೊರಬರಬೇಕು ಎಂದು ಹೇಳಿದರು.

ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಶಕ್ತಿ ನೀಡಿದೆ. ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತಿ ಮೂಲಕ ಇಂದು ಸಾಕಷ್ಟು ಜನ ಮುಖಂಡರು ರಾಜಕೀಯದಲ್ಲಿ ಬಹುದೊಡ್ಡ ಸ್ಥಾನಮಾನ ಪಡೆದು ಜನರ ಸೇವೆ ಮಾಡುತ್ತಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು ಮಾತ್ರ ಜನರ ಕೈಗೆ ಸಿಗುವುದೇ ಇಲ್ಲ. ಮೂರ್ನಾಲ್ಕು ಸಿಮ್ ಇಟ್ಟುಕೊಂಡಿದ್ದಾರೆ. ಯಾವ ನಂಬರ್‌ಗೆ ಸಿಗುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಪಿಡಿಒಗಳಿಗೆ ತರಾಟೆಗೆ ತೆಗೆದುಕೊಂಡರು. ಮುಂದೆ ಹಾಗಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು, ಪ್ರತಿ ತಿಂಗಳು ಸಾಮಾನ್ಯ ಸಭೆ ನಡೆಸುವ ಮೂಲಕ ಜನರ ಕುಂದುಕೊರತೆ ಆಲಿಸಿ ತಕ್ಷಣದಲ್ಲಿಯೇ ಸಾರ್ವಜನಿಕರ ಸಮಸ್ಯೆ ಬಗೆಹರಿಸಬೇಕು. ಗ್ರಾಮಗಳ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು, ಬೀದಿ ವಿದ್ಯುದ್ದೀಪ, ಚಂರಂಡಿ ಸ್ವಚ್ಛತೆವಾಗಿರುವಂತೆ ನೋಡಿಕೊಳ್ಳಬೇಕು. ಇದರಿಂದ ಮಲಿನ ಮುಕ್ತ ಗ್ರಾಮವನ್ನಾಗಿ ಮಾಡಲು ಸಾಧ್ಯ. ಪಂಚಾಯತ ರಾಜ್ಯ ನಡುವಳಿಕೆ ಪುಸ್ತಕ ಓದಿ ಕಾನೂನು ಜ್ಞಾನ ಪಡೆದುಕೊಳ್ಳುವಂತೆ ತಿಳಿಸಿದರು.

ಇಂದು ಎಲ್ಲ ಗ್ರಾಮಗಳಲ್ಲಿನ ಗಾಂವಟಾನ್‌ಗಳನ್ನು ಕಬಳಿಸಿ ಸರ್ಕಾರದ ಯಾವ ಕಚೇರಿ ನಿರ್ಮಿಸಲು ಸಾಧ್ಯವಾಗದ ಸ್ಥಿತಿ ಇದೆ. ಅಷ್ಟೊಂದು ಸರ್ಕಾರಿ ಜಾಗಗಳನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದೆ. 2010ರಿಂದ ಇಲ್ಲಿಯವರೆಗೆ ಸರ್ಕಾರ 25ರಿಂದ 40 ಸಾವಿರ ಮನೆಗಳನ್ನು ವಿತರಿಸಿದೆ. ಆದರೆ., ಅವೆಲ್ಲ ಏನಾದವೂ.?, ಇನ್ನು ಸಾಕಷ್ಟು ಜನ ನಿರಾಶ್ರೀತರು ಮನೆಯಿಲ್ಲರೆ ತೊಂದರೆ ಅನುಭವಿಸುತ್ತಿದ್ದಾರೆ. ಆಯಾ ಗ್ರಾಪಂ ಪಿಡಿಒಗಳು ಗ್ರಾಮಸಭೆ ನಡೆಸಿ ಯಾವುದೇ ಸೌಲಭ್ಯಗಳನ್ನು ಪಡೆಯದ ನೈಜ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡಬೇಕು ಎಂದು ಸಲಹೆ ನೀಡಿದರು.ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಕೇರಳ, ಮಹಾರಾಷ್ಟ್ರ ಮಾದರಿಯಲ್ಲಿ ಸ್ಥಳೀಯ ಸಂಸ್ಥೆಗಳ ಅನುದಾನ, ಚುನಾಯಿತ ಜನ ಪ್ರತಿನಿಧಿಗಳ ಗೌರವ ಧನ ಹೆಚ್ಚಿಸುವುದು ಹಲವು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವ ಮೂಲಕ ಮತ್ತಷ್ಟು ಶಕ್ತಿ ತುಂಬಲಾಗುವುದು ಹೇಳಿದರು.ವಿಧಾನ ಪರಿಷತ್ ಸದಸ್ಯರಾದಾಗಿನಿಂದ ಗ್ರಾಮ ಪಂಚಾಯಿತಿ, ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಕೇವಲ ₹ 500 ಮಾತ್ರ ನೀಡಲಾಗುತ್ತಿತ್ತು. ನಾನು 2018ರಲ್ಲಿ ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ ಅಧಿವೇಶನದಲ್ಲಿ ಧ್ವನಿ ಎತ್ತುವ ಮೂಲಕ ಚುನಾಯಿತ ಜನಪ್ರತಿನಿಧಿಗಳ ಗೌರವಧನ ಇಂದು ₹ 2ರಿಂದ 3 ಸಾವಿರಕ್ಕೆ ಏರಿಸುವಂತೆ ಮಾಡಿದ್ದೇನೆ ಎಂದರು.ಈಗ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಆಯಾ ಭಾಗದ ಆಡಳಿತಾತ್ಮಕ ಅಹವಾಲು ಸ್ವೀಕಾರ ನಡೆಸಿ ಅಧಿವೇಶನದಲ್ಲಿ ತಮ್ಮ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತೇನೆ ಎಂದರು. ಬಳಿಕ ವಿವಿಧ ಗ್ರಾಮ ಪಂಚಾಯಿತಿಗಳಿಂದ ಬಂದಿದ್ದ ಆಡಳಿತ ಮಂಡಳಿಯ ಅಹವಾಲು ಸ್ವೀಕರಿಸಿದರು.ಈ ವೇಳೆ ತಾಪಂ ಇಒ ಮಸಳಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ತಾಲೂಕು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ, ಪಿಎಲ್ ಡಿ ಬ್ಯಾಂಕ್‌ ಅಧ್ಯಕ್ಷ ಬಿ.ಕೆ.ಬಿರಾದಾರ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ತಾಲೂಕು ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶಳ್ಳಗಿ ಸೇರಿ ಹಲವರು ಇದ್ದರು.