ಸಾರಾಂಶ
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಯತ್ನಿಸಲು ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕರ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರು ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಚಡಚಣ
ಪ್ರಾಚಾರ್ಯರು, ಉಪನ್ಯಾಸಕರ ಮೇಲೆ ಪೋಷಕರ ನಂಬಿಕೆಯನ್ನು ಇಟ್ಟಿರುತ್ತಾರೆ ಆದ್ದರಿಂದ ವಿದ್ಯಾಥರ್ಿಗಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಹೇಳಿದರು.ತಾಲೂಕಿನ ವಿವಿದ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಪಟ್ಟಣದ ಶ್ರೀ ಸಂಗಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಉಪನ್ಯಾಸಕರು ಸಭೆಯಲ್ಲಿ ಅವರು ಮಾತನಾಡಿದರು.
ಪಿಯು ಫಲಿತಾಂಶದಲ್ಲಿ ವಿಜಯಪೂರ ಜಿಲ್ಲೆಯು ಮೊದಲು ಸ್ಥಾನಕ್ಕೆ ಬರಬೇಕಾದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷೇಶ ಮಾರ್ಗದರ್ಶನ ಮಾಡಬೇಕು. ಹಿಂದುಳಿದ ವಿದ್ಯಾರ್ಥಿಗಳು ಉತ್ತೀರ್ಣಗೊಳ್ಳಲು ಅವರಿಗೆ ವಿಶೇಷ ವರ್ಗಗಳನ್ನು ತಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು. ಉಪನ್ಯಾಸಕರು ಇಲಾಖೆಯ ಮಾರ್ಗಸೂಚಿಯಂತೆ ಕೆಲಸ ನಿರ್ವಹಿಸಬೇಕು. ದಿನಚರಿ ಮತ್ತು ಹಾಜರಾತಿ ಪುಸ್ತಗಳನ್ನು ಸರಿಯಾಗಿ ನಿರ್ವವಹಿಸಬೇಕು ಮತ್ತು ಜಾಣ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಉಪನಿರ್ದೇಶಕರು ಅವರಿಗೆ ಹೆಚ್ಚು ಅಂಕಗಳನ್ನು ಪಡೆಯಲು ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಮನೋಜಕುಮಾರ ಕಟಗೇರಿ, ಹಿರಿಯ ಉಪನ್ಯಾಸಕ ಬಿ.ಎಸ್ ಅಂಡಗಿ, ಉಪನ್ಯಾಸಕರು ಮತ್ತು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಯತ್ನಿಸಲು ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕರ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರು ಸಲಹೆ ನೀಡಿದರು.