ಸಾರಾಂಶ
ಕನಕಪುರ: ಕ್ಷಯರೋಗಿಯನ್ನು ಮುಟ್ಟುವುದರಿಂದ ಹಾಗೂ ಕೈ ಕುಲುವುದರಿಂದ ಕ್ಷಯರೋಗ ಹರಡುವುದಿಲ್ಲ, ರೋಗಿ ಕೆಮ್ಮಿದಾಗ, ಸೀನಿದಾಗ, ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಲೋಕೇಶ್ ತಿಳಿಸಿದರು.

ತಾಲೂಕಿನ ಚಿಕ್ಕಮುದುವಾಡಿಯ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷಯ(ಟಿಬಿ) ಸಾಂಕ್ರಾಮಿಕ ರೋಗವಾಗಿದ್ದು, ಮೈಕ್ರೋ ಬ್ಯಾಕ್ಟೀರಿಯಾಂ ಟ್ಯೂಬರ್ಕ್ಯುಲೋ ಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಸಂಭವಿಸುತ್ತದೆ. ಇದು ಮುಖ್ಯವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದಲ್ಲದೆ ಮೂತ್ರಪಿಂಡಗಳು, ಬೆನ್ನು ಮೂಳೆ ಮತ್ತು ಇತರೆ ಅಂಗಗಳ ಮೇಲೂ ಪರಿಣಾಮ ಬೀರಬಹುದು, ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆಯಿಂದ ಕ್ಷಯರೋಗ ಗುಣಪಡಿಸಬಹುದೆಂದು ತಿಳಿಸಿದರು.ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶಿಲ್ಪಶ್ರೀ ಮಾತನಾಡಿ, ಕೆಮ್ಮು, ಜ್ವರ , ರಾತ್ರಿಯ ಬೆವರು, ತೂಕ ನಷ್ಟ ಕ್ಷಯರೋಗದ ಪ್ರಮುಖ ಲಕ್ಷಣಗಳಾಗಿವೆ. ಕ್ಷಯರೋಗವನ್ನು ಸೂಕ್ತ ಸಮಯದಲ್ಲಿ ಪತ್ತೆ ಹಚ್ಚಿ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ಗುಣರಾಗಬಹುದು ಎಂದು ತಿಳಿಸಿದರು.
ಪ್ರಾಂಶುಪಾಲ ಕೆ.ರವಿ, ಉಪನ್ಯಾಸಕ ಎಚ್.ಎಸ್. ನಾಗೇಶ್ ನಿರೂಪಿಸಿದರು, ಹಿರಿಯ ಉಪನ್ಯಾಸಕ ತಮ್ಮಣ್ಣನವರ್ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ರಾವ್ ವಂದಿಸಿದರು, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ರಾಜಶೇಖರ್, ಸೌಂದರ್ಯ ತ್ಯಾಗರಾಜ್, ಕುಮಾರ್ ಸೇರಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.