ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

| N/A | Published : Mar 17 2025, 12:32 AM IST / Updated: Mar 17 2025, 12:14 PM IST

BSY
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌

 ಬೆಳಗಾವಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಗೆ ವಿಶೇಷವಾದ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಾವೆಲ್ಲಾ ಕುಟುಂಬದವರು ಬಂದಿದ್ದೇವೆ. ಮಧ್ಯಾಹ್ನದ ನಂತರ ಬೆಂಗಳೂರಿಗೆ ವಾಪಸ್​ ಹೋಗುತ್ತೇವೆ. ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ ನೂರು ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿದೆ. ಆ ದಿಕ್ಕಿನಲ್ಲಿ ನಾವೆಲ್ಲಾ ಒಟ್ಟಾಗಿ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ನಾಯಕರಿಗೆ ಏನಾದರೂ ಸಲಹೆ ಕೊಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ, ಸಲಹೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಷ್ಟೇ ಎಂದ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪನವರು ಕೊಟ್ಟಷ್ಟು ಪ್ರಾಮುಖ್ಯತೆ ಈಗಿನ ಸರ್ಕಾರ ಕೊಟ್ಟಿಲ್ಲ, ಅನ್ಯಾಯ ಆಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರು. ಯತ್ನಾಳ್ ಬಗ್ಗೆ ಮಾಧ್ಯಮಗಳ ಪ್ರಶ್ನೆ ಕೇಳುತ್ತಿದ್ದಂತೆ ಯಡಿಯೂರಪ್ಪ ಮೌನಕ್ಕೆ ಶರಣಾದರು. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಈಗಾಗಲೇ ಈ ಬಗ್ಗೆ ಹೇಳಿದೆ. ಹಾಗಾಗಿ, ಜನರಿಗೂ ಕೂಡ ಈ ವಿಚಾರದಲ್ಲಿ ಖುಷಿ ಇಲ್ಲ. ಸುಪ್ರೀಂ ಕೋರ್ಟ್ ಇದನ್ನು ನೋಡಿಕೊಳ್ಳಲಿದೆ ಎಂದು ಹೇಳಿದರು.