ತುಳು ಭಾಷೆ ಮತ್ತು ಸಂಸ್ಕೃತಿ ಪ್ರಾಚೀನ ಹಾಗೂ ಶ್ರೀಮಂತ ಇತಿಹಾಸ ಹೊಂದಿದೆ. ಆಧುನಿಕ ಯುಗದಲ್ಲಿ ಯುವ ಪೀಳಿಗೆಗೆ ನಮ್ಮ ಮೂಲ ಪರಂಪರೆ ಪರಿಚಯಿಸುವ ಮತ್ತು ಅದನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ವಿಚಾರ ಸಂಕಿರಣಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ. ತ್ರಿಶಲಾ ಜೈನ್ ಕೆ.ಎಸ್. ಹೇಳಿದ್ದಾರೆ.
ಬೆಳ್ತಂಗಡಿ: ತುಳು ಭಾಷೆ ಮತ್ತು ಸಂಸ್ಕೃತಿ ಪ್ರಾಚೀನ ಹಾಗೂ ಶ್ರೀಮಂತ ಇತಿಹಾಸ ಹೊಂದಿದೆ. ಆಧುನಿಕ ಯುಗದಲ್ಲಿ ಯುವ ಪೀಳಿಗೆಗೆ ನಮ್ಮ ಮೂಲ ಪರಂಪರೆ ಪರಿಚಯಿಸುವ ಮತ್ತು ಅದನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ವಿಚಾರ ಸಂಕಿರಣಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ. ತ್ರಿಶಲಾ ಜೈನ್ ಕೆ.ಎಸ್. ಹೇಳಿದ್ದಾರೆ.ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ತುಳು ಬಾಸೆ, ಸಾಹಿತ್ಯ ಬೊಕ್ಕ ಸಂಸ್ಕೃತಿ ಎಂಬ ವಿಷಯದ ಕುರಿತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ವಿಶೇಷ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಬಿ. ಮಾತನಾಡಿ, ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯದ ಬೋಧನೆಗೆ ಸೀಮಿತವಾಗಬಾರದು. ಪ್ರಾದೇಶಿಕ ಭಾಷೆ, ಕಲೆ ಮತ್ತು ಸಂಸ್ಕೃತಿ ಬೆಳೆಸುವ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ ಶುಭ ಹಾರೈಸಿದರು.
ಶಾಂತಿ ಶ್ರೀ ಜೈನ ಮಹಿಳಾ ಸಮಾಜದ ವತಿಯಿಂದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.ದ್ವಿತೀಯ ಹಂತದಲ್ಲಿ ನಡೆದ ವಿಚಾರಗೋಷ್ಠಿಗಳಲ್ಲಿ, ಪ್ರಸಿದ್ಧ ತುಳು ಸಂಶೋಧಕ ಡಾ. ಯಶುಕುಮಾರ್ ಡಿ. ಅವರು ''''''''ತುಳು ಭಾಷೆ ಮತ್ತು ಸಾಹಿತ್ಯ''''''''ದ ಕುರಿತು ಹಾಗೂ ಖ್ಯಾತ ತುಳು ವಿದ್ವಾಂಸರಾದ ಶ್ರೀ ದಯಾನಂದ ಜಿ. ಕತ್ತಲ್‌ಸಾರ್ ಅವರು ''''''''ತುಳು ಸಂಸ್ಕೃತಿ''''''''ಯ ವಿಶಿಷ್ಟತೆಯ ಕುರಿತು ವಿಶೇಷ ಉಪನ್ಯಾಸ ನೀಡಿ ತಜ್ಞರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡರು.
ಶ್ರೀ ಧ ಮಂ ತುಳು ಪೀಠದ ಸಲಹಾ ಸಮಿತಿ ಪದಾಧಿಕಾರಿಗಳಾದ ರಾಜಶ್ರೀ ಹೆಗ್ಡೆ ಕಣಿಯೂರು ಗುತ್ತು ಸ್ವಾಗತಿಸಿದರು. ತುಳು ಪೀಠದ ಸಂಯೋಜಕರಾದ ಪ್ರಸಾದ್ ಅಂಚನ್ ವಂದಿಸಿದರು. ಉಪನ್ಯಾಸಕ ವೈಷ್ಣವಿ ಹಾಗೂ ಶಿಕ್ಷಕರಾದ ಚಂದ್ರಪ್ಪ ನಿರೂಪಿಸಿದರು.