ಸಾರಾಂಶ
ನಟಿ ಆರ್.ಜೆ. ಮಧುರಾ ಮಾತನಾಡಿ, ಸಿನಿಮಾ ನೋಡಿದವರು ತುಂಬಾ ಚೆನ್ನಾಗಿದೆ ಎಂದು ಬೆನ್ನು ತಟ್ಟಿದ್ದಾರೆ. ತುಳುವರು ಥಿಯೇಟರ್‌ಗೆ ಬಂದು ಸಿನಿಮಾ ನೋಡಿದರೆ ನಾವು ಇನ್ನಷ್ಟು ಕಡಿಮೆ ಬಜೆಟ್ ನಲ್ಲಿ ಸಿನಿಮಾ ಮಾಡಲು ಸಾಧ್ಯ ಎಂದರು.
ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ ‘ಅನರ್‌ಕಲಿ’ ತುಳು ಸಿನಿಮಾ ಆ.23ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಶೋರ್ ಡಿ ಶೆಟ್ಟಿ, ಅನರ್‌ಕಲಿ ಸಿನಿಮಾದ ಪ್ರೀಮಿಯರ್ ಶೋವನ್ನು ಈಗಾಗಲೇ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. ಇದು ನಮ್ಮ ಚಿತ್ರತಂಡಕ್ಕೆ ಖುಷಿ ತಂದಿದೆ. ಆ.23ರಂದು ಸಿನಿಮಾ ಬಿಡುಗಡೆಯಾಗಲಿದ್ದು, ತುಳುವರು ವೀಕ್ಷಿಸಿ ನಮ್ಮನ್ನು ಗೆಲ್ಲಿಸಬೇಕು ಎಂದರು.ನಟ ಶೋಭರಾಜ್ ಪಾವೂರು ಮಾತನಾಡಿ, ಇದೊಂದು ಪರಿಶುದ್ಧವಾದ ತುಳು ಸಿನಿಮಾ. ಈ ಸಿನಿಮಾ ಹಿಂದೆ ಬಂದಿಲ್ಲ, ಹಾಗಿದೆ- ಹೀಗಿದೆ ಎಂದು ಸುಮ್ಮನೆ ಹೇಳುವುದಿಲ್ಲ. ಆದರೆ ಈ ಸಿನಿಮಾ ನೋಡಿದ ಬಳಿಕ ಎರಡು ದಿನಗಳಾದರೂ ನಿಮ್ಮನ್ನು ಕಾಡುತ್ತದೆ. ನಿಮ್ಮ ಹಣಕ್ಕೆ ಖಂಡಿತಾ ಲಾಸ್ ಆಗುವುದಿಲ್ಲ ಎಂದರು.
ನಟಿ ಆರ್.ಜೆ. ಮಧುರಾ ಮಾತನಾಡಿ, ಸಿನಿಮಾ ನೋಡಿದವರು ತುಂಬಾ ಚೆನ್ನಾಗಿದೆ ಎಂದು ಬೆನ್ನು ತಟ್ಟಿದ್ದಾರೆ. ತುಳುವರು ಥಿಯೇಟರ್‌ಗೆ ಬಂದು ಸಿನಿಮಾ ನೋಡಿದರೆ ನಾವು ಇನ್ನಷ್ಟು ಕಡಿಮೆ ಬಜೆಟ್ ನಲ್ಲಿ ಸಿನಿಮಾ ಮಾಡಲು ಸಾಧ್ಯ ಎಂದರು. ನಿರ್ದೇಶಕ ಹರ್ಷಿತ್ ಸೋಮೇಶ್ವರ ಮಾತನಾಡಿ, ಈ ಸಿನಿಮಾದಲ್ಲಿ 2 ಗಂಟೆ 10 ನಿಮಿಷಗಳ ಕಾಲ ಜನರನ್ನು ರಂಜಿಸಲು ಏನೆಲ್ಲಾ ಬೇಕೋ ಅದೆಲ್ಲವನ್ನು ತೋರಿಸಿದ್ದೇವೆ. ತುಳು ಭಾಷೆಯ ಸಿನಿಮಾವನ್ನು ಉಳಿಸಲು ಎಲ್ಲರೂ ಬೆಂಬಲ ನೀಡಬೇಕು ಎಂದು ಹೇಳಿದರು.ಅರುಣ್ ರೈ ಪುತ್ತೂರು, ವಾತ್ಸಲ್ಯ, ಲಂಚುಲಾಲ್, ರಜನೀಶ್ ಕೋಟ್ಯಾನ್, ರೋಹಿತ್, ಮೋಹನ್ ಕೊಪ್ಪಲ ಮತ್ತಿತರರು ಇದ್ದರು.