ಇಂದು ‘ತುಡರ್’ ತುಳು ಸಿನಿಮಾ ತೆರೆಗೆ

| Published : Jun 14 2024, 01:02 AM IST

ಸಾರಾಂಶ

ಈಗಾಗಲೇ ತುಡರ್ ಸಿನೆಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನೆಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ ‘ತುಡರ್’ ತುಳು ಸಿನೆಮಾ ಜೂ.14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ಸಾಹಿತ್ಯ, ಕಥೆ ರಚನೆಕಾರ ಮೋಹನ್‌ ರಾಜ್‌, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿಯ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಹೇಳಿದರು.

ಈಗಾಗಲೇ ತುಡರ್ ಸಿನೆಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನೆಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾಥ್೯ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ‌ ಎಂದರು.

ತಾರಾಗಣದಲ್ಲಿ ಸಿದ್ಧಾರ್ಥ್ ಎಚ್. ಶೆಟ್ಟಿ, ದೀಕ್ಷಾ ಭಿಷೆ, ಅರವಿಂದ ಬೋಳಾರ್, ರೂಪಾ ವರ್ಕಾಡಿ, ಸದಾಶಿವ ಅಮೀನ್, ನಮಿತಾ ಕೂಳೂರು, ಎಲ್ಟನ್ ಮಸ್ಕರೇನ್ಹಸ್, ವಿಕಾಸ್ ಪುತ್ರನ್, ಪ್ರಜ್ವಲ್ ಶೆಟ್ಟಿ ಮತ್ತಿತರರು ಇದ್ದಾರೆ. ಸಿನಿಮಾಕ್ಕೆ ವಿಲ್ಸನ್ ರೆಬೆಲ್ಲೊ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರು: ಹರೀಶ್ ಶೆಟ್ಟಿ, ವಿದ್ಯಾ ಸಂಪತ್, ನಿರ್ದೇಶಕರು: ತೇಜೇಶ್ ಪೂಜಾರಿ ಎಲ್ಟನ್ ಮಸ್ಕರೇನಸ್, ಕಥೆ, ಚಿತ್ರ ಕಥೆ, ಸಂಭಾಷಣೆ ಸಾಹಿತ್ಯ: ಮೋಹನ್ ರಾಜ್. ಸಂಗೀತ: ಪ್ಯಾಟ್ಟ್ಸನ್ ಪಿರೇರಾ, ಸಾಯೀಶ್ ಭಾರದ್ವಾಜ್, ಛಾಯಾಗ್ರಹಣ: ಚಂತೂ ಮೆಪ್ಪಯುರು.

ಗೋಷ್ಠಿಯಲ್ಲಿ ವಿಲ್ಸನ್‌ ರೆಬೆಲ್ಲೊ, ವಿದ್ಯಾ, ಸಂಪತ್‌, ಹರೀಶ್ ಶೆಟ್ಟಿ, ಸಿದ್ಧಾರ್ಥ್‌ ಶೆಟ್ಟಿ, ಎಲ್ಟನ್‌ ಮಸ್ಕರೇನಸ್‌, ತೇಜಸ್ ಪೂಜಾರಿ ಇದ್ದರು.