ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. ಸೋಮವಾರ ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿನ ಪೂರ್ವ ಸಿದ್ಧತೆ ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 3 ವರ್ಷಗಳ ಹಿಂದೆ ನಡೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿತ್ತು. ಐದು ಗ್ಯಾರಂಟಿಗಳೂ ಸೇರಿದಂತೆ ಆದ್ಯತಾ ವಿಷಯಗಳನ್ನು ರಾಜ್ಯದ ಜನತೆಗೆ ಆಶ್ವಾಸನೆ ನೀಡಿ ಚುನಾವಣೆ ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದೆವು. ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಐದೂ ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಲ್ಲದೆ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ತಿಳಿಸಿದರು. ಕಂದಾಯ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವ ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರರು, ತಹಶೀಲ್ದಾರರು ಹಾಗೂ ಭೂಮಾಪನಾ ಇಲಾಖೆಯ ಸರ್ವೆಯರ್‌ಗಳು, ಸಹಾಯಕ ಭೂ ದಾಖಲೆಗಳ ಉಪನಿರ್ದೇಶಕರುಗಳಿಗೆ ಮಾನ್ಯರುಗಳಿಂದ ಪ್ರಶಂಸಣಾ ಪತ್ರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರಿಗೆ, ಶಾಸಕರಿಗೆ ಖುದ್ದು ಆಹ್ವಾನ ನೀಡಲಾಗಿದೆ. ಅಲ್ಲದೆ, ಪ್ರತಿಪಕ್ಷ ನಾಯಕರೂ, ಸಂಸದರೂ, ನಿಗಮ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉಪಸ್ಥಿತರಿದ್ದರು.
ಕಂದಾಯ ಇಲಾಖೆಯ ಸಾಧನೆಯಲ್ಲಿ ತುಮಕೂರು ಪ್ರಥಮ
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.