ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ತುಮಕೂರು: ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ. 

ಈ ಸಂಬಂಧ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಕಾರಣ ಕೇಳಿ, ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಲೋಕೇಶ್‌ ಅವರಿಗೆ ಈ ಬಗ್ಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.

 ಸೆ.18ರಂದು ಈ ಘಟನೆ ನಡೆದಿತ್ತು. ತುಮಕೂರು ಜಿಲ್ಲೆ ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯಲ್ಲಿ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಹೊನ್ನೂರಪ್ಪ ಅವರನ್ನು ಪಾವಗಡ ತಾಲೂಕು ವೈ.ಎನ್. ಹೊಸಕೋಟೆ ಆಸ್ಪತ್ರೆಗೆ ಕರೆ ತರಲಾಗಿತ್ತು. 

ಆಸ್ಪತ್ರೆಗೆ ಬರುವ ವೇಳೆಗೆ ಹೊನ್ನೂರಪ್ಪನ ಜೀವ ಹೋಗಿತ್ತು. ಆದರೆ, ಶವ ಸಾಗಿಸಲು ಆ್ಯಂಬುಲೆನ್ಸ್‌ ಸಿಬ್ಬಂದಿ ನಿರಾಕರಿಸಿದ ಹಿನ್ನೆಲೆ ಮಕ್ಕಳು ಬೈಕ್‌ನಲ್ಲಿ ಶವ ಸಾಗಿಸಿದ್ದರು.