ಸಾಂಗವಾಗಿ ನಡೆದ ಅಂತ್ಯ ಸುಬ್ರಮಣ್ಯೇಶ್ವರ ರಥೋತ್ಸವತುಮಕೂರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣವಾಗಿರುವ ತಾಲೂಕಿನ ನಾಗಲಮಡಿಕೆಯ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಭಾನುವಾರ ಸಾವಿರ ಸಂಖ್ಯೆಯ ಭಕ್ತರ ನಡುವೆ ಯಶಸ್ವಿ ಯಾಗಿ ನೆರವೇರಿತು. ಮಧ್ಯಾಹ್ನ 12.30ಕ್ಕೆ ನಡೆದ ಬ್ರಹ್ಮರಥೋತ್ಸವಕ್ಕೆ ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ, ತಹಸೀಲ್ದಾರ್ ಡಿ.ಎನ್.ವರದರಾಜು ಚಾಲನೆ ನೀಡಿದರು.