ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶ: ಸಿದ್ಧಲಿಂಗ ಸ್ವಾಮೀಜಿಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶಪ್ರಾಯವಾದುದು. ಭಾರತ ಪವಿತ್ರರಾಷ್ಟ್ರ. ಅನಾದಿ ಕಾಲದಿಂದಲೂ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ನೀಡುತ್ತಿರುವ ರಾಷ್ಟ್ರ ನಮ್ಮದು ಎಂದು ತುಮಕೂರಿನ ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ವಿವೇಕ ದಶಮಿ: ಭಾವಾವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.