ಗಣಿಗಾರಿಕೆಗೆ ಅನುಮತಿಗೆ ನೀಡಿರುವುದಕ್ಕೆ ವಿರೋಧರಾಜ್ಯದಲ್ಲಿ ಈಗಾಗಲೇ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ, ಅದೇ ರೀತಿ ತುಮಕೂರು, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಇದರ ವ್ಯಾಪ್ತಿ ವಿಸ್ತರಿಸುತ್ತಿರುವುದರಿಂದ ಇಲ್ಲಿನ ಸ್ಥಳೀಯ ಜನತೆ ಎಚ್ಚೆತ್ತುಕೊಂಡು ಮುಂದೆ ಆಗುವ ಅನಾಹುತಗಳನ್ನುತಡೆಯಬೇಕಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಎಚ್ಚರಿಸಿದರು.