ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ವಿಷಯವೂ ಮುಖ್ಯ: ಯಮುನಾವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕೌಶಲ್ಯ, ವಿವೇಚನೆ, ಸಾಮಾನ್ಯ ಜ್ಞಾನದ ಅರಿವನ್ನು ಹೆಚ್ಚಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು. ತಿಪಟೂರಿನಲ್ಲಿ ಶಾಲಾ ವಸ್ತುಪ್ರದರ್ಶನ ಸ್ಪೆಕ್ಟ್ರಮ್-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.