ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.