ಎಕ್ಸ್ ಪ್ರೆಸ್ ಕೆನಾಲ್ ವಿರುದ್ಧ ಮುಂದುವರೆದ ಹೋರಾಟಪೈಪ್ಲೈನ್ ಮೂಲಕ ಕುಣಿಗಲ್, ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹೋರಾಟ ಮುಂದುವರಿದಿದ್ದು, ಸೋಮವಾರ ಎರಡೂ ಪಕ್ಷಗಳ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.