ಗೂಳೂರು ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.