ಜನವರಿಗೆ ಶಿರಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ2025ರ ಜನವರಿಯಲ್ಲಿ ಶಿರಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಅವರ ಸಮ್ಮುಖದಲ್ಲಿ ಸುಮಾರು 15 ರಿಂದ 20 ಸಾವಿರ ನಿವೇಶನ ರಹಿತರಿಗೆ ನಿವೇಶನ ನೀಡುವ ಸಂಕಲ್ಪ ಮಾಡಿದ್ದು, ಅಧಿಕಾರಿ, ನೌಕರರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ಶಿರಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.