ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.