ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ :ಜಿ.ಪಂ. ಸಿಇಒ ಪ್ರಭುಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ಗಳಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು.