ಶಿಕ್ಷಣವು ವ್ಯಕ್ತಿಯ ಬದುಕನ್ನು ಕಟ್ಟಿಕೊಳ್ಳಲು ರುವಾರಿ. ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಮಹತ್ವದ ತಿರುವಾಗಿದ್ದು, ನಿಮ್ಮ ಸಾಮರ್ಥ್ಯ, ಸಾಧನೆಗಳು ಮುಂದಿನ ಭವಿಷ್ಯವನ್ನು ನಿರ್ಮಿಸುವ ಬುನಾದಿಗಳಾಗಿವೆ. ಸರ್ಕಾರಿ ಪಪೂ ಕಾಲೇಜಿಗೆ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ನಾನು ಒದಗಿಸುತ್ತೇನೆ. ನೀವು ಅದರ ಸದುಪಯೋಗಪಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ, ಆಗ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದ ಅವರು, ಕಾಲೇಜಿನ ಮೂಲಭೂತ ಸೌಲಭ್ಯಗಳಿಗೆ ಶಾಸಕರ ನಿಧಿಯಿಂದ 10 ಲಕ್ಷ ರು.ಗಳನ್ನು ಕೊಡುವುದಾಗಿ ಭರವಸೆ ನೀಡಿದರು