ವಿಕಲಚೇತನರು ಆತ್ಮಸ್ಥೆರ್ಯ ಕಳೆದುಕೊಳ್ಳದಿರಿವಿಕಲಚೇತನರು ಎಂದಿಗೂ ಆತ್ಮಸ್ಥೆರ್ಯ ಕಳೆದುಕೊಳ್ಳಬೇಡಿ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ನಗರದ ತಾಪಂ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.