ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನ ಗಿಟ್ಟು ಕೆಲಸ ಮಾಡಿಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನವನ್ನು ಬದಿಗಿಟ್ಟು ಸಾರ್ವಜನಿಕರು, ರೈತರೊಂದಿಗೆ ಬೆರೆತು ಸೌಜನ್ಯದಿಂದ ವರ್ತಿಸಿ ಸ್ಪಂದಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವ ಕೆಲಸ ನಿಮ್ಮದಾಗಿದ್ದು ಕಾಟಾಚಾರಕ್ಕೆ ಕೆಲಸ ಮಾಡದೆ ಜವಾಬ್ದಾರಿಂದ ಕೆಲಸ ನಿರ್ವಹಿಸಿ ಗೌರವ ಉಳಿಸಿಕೊಳ್ಳಿ ಎಂದು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.