30 ರಂದು ಆಪರೇಷನ್ ಸಿಂದೂರ್ ವಿಜಯೋತ್ಸವಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿ, ಭಾರತದ ಭದ್ರತೆಗೆ ಸವಾಲು ಹಾಕಿದ ಕೃತ್ಯಕ್ಕೆ ಪ್ರತೀಕಾರವಾಗಿ ನಡೆದ ಕಾರ್ಯಾಚರಣೆಯ ಯಶಸ್ಸಿನ ಆಪರೇಷನ್ ಸಿಂದೂರ್ ವಿಜಯೋತ್ಸವ ವನ್ನು ಈ ತಿಂಗಳ 30 ರಂದು ನಗರದಲ್ಲಿ ಆಚರಿಸಲಾಗುತ್ತದೆ ಎಂದು ಆಚರಣೆ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.