ಇಂದಿನಿಂದ 2 ದಿನ ದಸರಾ ಸಾಂಸ್ಕೃತಿಕ ಮೆರಗುತುಮಕೂರುತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12 ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.