ಸರ್ಕಾರಗಳು ರೈತರು, ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿವೆಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ, ಬೆಲೆ ಏರಿಕೆ, ಕಾರ್ಪೋರೇಟ್ ಪರ ನೀತಿ ಸೇರಿದಂತೆ ಕಾರ್ಮಿಕರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ ಭಾರತ್ ಬಂದ್ ಅಂಗವಾಗಿ ಇಲ್ಲಿನ ಸಿಐಟಿಯು ಮತ್ತು ಜಿಲ್ಲಾ ಕೇಂದ್ರದ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿ ಬಂದ್ಗೆ ಬೆಂಬಲ ಸೂಚಿಸಲಾಯಿತು.