ದಾರ್ಶನಿಕರ ಜಯಂತಿಗಳು ಒಂದೇ ವೇದಿಕೆಯಲ್ಲಾಗಲಿಸರಕಾರ ದಲಿತ, ಹಿಂದುಳಿದ ಸಮುದಾಯಗಳ ದಾರ್ಶನಿಕರ ಜಯಂತಿಗಳನ್ನು ಆಚರಿಸಲು ಅವಕಾಶ ಕಲ್ಪಿಸಿದೆ. ಆದರೆ ಈ ಎಲ್ಲರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಆಚರಿಸಲು ಅವಕಾಶ ಕಲ್ಪಿಸಿದರೆ ಹಿಂದುಳಿದ ಸಮುದಾಯಗಳಲ್ಲಿ ಒಗ್ಗಟ್ಟು ಮೂಡಿಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಸಹ ಗಮನಹರಿಸಬೇಕಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಚಿದಾನಂದ ತಿಳಿಸಿದ್ದಾರೆ.