ಕನಿಷ್ಠ 7500 ರು. ಮಾಸಿಕ ಪಿಂಚಣಿ ನೀಡಬೇಕುಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರು. ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ.