ಕಾಡುಗೊಲ್ಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರತಿಪಟೂರು: ಕಾಡುಗೊಲ್ಲ ಸಮಾಜದ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಕಾಡುಗೊಲ್ಲರ ಸಂಘ ತಾಲೂಕು ಘಟಕದ ವತಿಯಿಂದ ಮೂರನೇ ವರ್ಷದ ಪ್ರತಿಭಾ ಪುರಸ್ಕಾರವನ್ನು ಸೆ.29 ರ ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ರೋಟರಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಬಾಲರಾಜು ತಿಳಿಸಿದರು.