ಕುಲಾಂತರಿಗೆ ವಿರೋಧ: 29ರಿಂದ ಸತ್ಯಾಗ್ರಹತುಮಕೂರು: ಮನುಷ್ಯ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯಿಂದ ಹಿಂದೆ ಸರಿಯಬೇಕು. ರಾಷ್ಟ್ರೀಯ ನೀತಿ ರೂಪಿಸುವ ವೇಳೆ ರೈತರು, ಕೃಷಿತಜ್ಞರು, ರೈತಪ್ರತಿನಿಧಿಗಳು ಹಾಗೂ ರಾಜ್ಯ ಸರಕಾರಗಳೊಂದಿಗೆ ಸಮಾಲೋಚಿಸಿ ನೀತಿ ರೂಪಿಸುವಂತೆ ಒತ್ತಾಯಿಸಿ ಸೆಪ್ಟಂಬರ್ 29ರಿಂದ ಅಕ್ಟೋಬರ್ 2ವರಗೆ ನಾಲ್ಕು ದಿನಗಳ ಕಾಲ ದೊಡ್ಡಹೊಸೂರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನಿ ಡಾ.ಮಂಜುನಾಥ್ ತಿಳಿಸಿದ್ದಾರೆ.