ರತ್ನಮ್ಮ ಭೋವಿ ಕುಟುಂಬಕ್ಕೆ ಧನ ಸಹಾಯಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಪುರ ಗ್ರಾಮದ ಗೌಡನಕಟ್ಟೆ ಗ್ರಾಮದಲ್ಲಿ ಯುಗಾದಿ ಹಬ್ಬದಂದು ರತ್ನಮ್ಮ ಭೋವಿ ಅವರ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಗುಡಿಸಲಿನಲ್ಲಿದ್ದ ದಿನಬಳಕೆ ವಸ್ತುಗಳು, ಎರಡು ಹಸು, ಒಂದು ಕರು. ಎರಡು ಕುರಿ, ನಾಲ್ಕು ಮೇಕೆ ಸಂಪೂರ್ಣ ಭಸ್ಮವಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಧನ ಸಹಾಯ ಮಾಡಿದರು.