ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆಗೆ ಪ್ರಯತ್ನವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.