ವೈದ್ಯ ವಿದ್ಯಾರ್ಥಿನಿ ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿಕೋಲ್ಕತಾದ ಆರ್. ಜೆ. ಕರ್ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ತುಮಕೂರಿನ ನಗರದ ಟೌನ್ ಹಾಲ್‌ನಿಂದ ಎಂ.ಜಿ ರಸ್ತೆ ಮಾರ್ಗವಾಗಿ ಎಐಡಿಎಸ್‌ಓ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕ್ಯಾಂಡಲ್ ಮೆರವಣಿಗೆ ಮಾಡಲಾಯಿತು.