ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘಕ್ಕೆ ನಿವೇಶನ ನೀಡಿಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘಕ್ಕೆ ನಿವೇಶನ ನೀಡುವಂತೆ ಕಳೆದ 23 ವರ್ಷಗಳಿಂದ ಮನವಿ ಸಲ್ಲಿಸಿದ್ದರೂ, ಇದುವರೆಗೂ ನಿವೇಶನ ನೀಡದೆ ಗೃಹ ನಿರ್ಮಾಣ ಕಾರ್ಮಿಕರನ್ನು ಶಾಸಕರು ನಿರ್ಲಕ್ಷಿಸಿದ್ದಾರೆ. ಆದ್ದರಿಂದ ಶೀಘ್ರದಲ್ಲಿಯೇ ಸಂಘಕ್ಕೆ ನಿವೇಶನ ನೀಡಬೇಕು ಎಂದು ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮುಬಾರಕ್ ಪಾಷ ಒತ್ತಾಯಿಸಿದರು.