ಡೆಂಘೀ ತಡೆಗೆ ಅಗತ್ಯ ಕ್ರಮ ವಹಿಸಿ: ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚನೆಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಸ್ವಚ್ಛತೆ ಕಾಪಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಹಸೀಲ್ದಾರ್ ಪವನ್‌ಕುಮಾರ್ ಸೂಚಿಸಿದರು. ತಿಪಟೂರಿನಲ್ಲಿ ಡೆಂಘೀ ಟಾಸ್ಕ್‌ಫೋರ್ಸ್ ಕಮಿಟಿಯ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.