ಮದ್ಯ ಮಾರಾಟ ಮಳಿಗೆ ತೆರೆದರೆ ಉಗ್ರ ಹೋರಾಟತಾಲೂಕಿನ ಹೊನ್ನವಳ್ಳಿ ಹೋಬಳಿ ಕೆರೆ ಬಂಡಿಪಾಳ್ಯದ ಗ್ರಾಮದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಗ್ರಾಮದ ಮಹಿಳೆಯರು ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.