ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಬೆಳಿಗ್ಗೆ ತುಮಕೂರು ಹಾಗೂ ಕೊರಟಗೆರೆ ತಾಲೂಕಿನ ವಿವಿಧ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪೌತಿ ಖಾತೆ, ಲ್ಯಾಂಡ್ ಬೀಟ್, ಬೆಳೆ ಸಮೀಕ್ಷೆ, ಸ್ಮಶಾನ ಒತ್ತುವರಿ, ಪಹಣಿಗೆ ಆಧಾರ್ ಜೋಡಣೆ ಸೇರಿದಂತೆ ವಿವಿಧ ಕಂದಾಯ ವಿಷಯಗಳ ಪ್ರಗತಿ ಪರಿಶೀಲಿಸಿದರು.