ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ತಮಟೆ ಚಳವಳಿ: ನಾಗತಿಹಳ್ಳಿ ಕೃಷ್ಣಮೂರ್ತಿಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೆ.12ರಂದು ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ತಿಳಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.