ಪೌತಿ ಖಾತೆ ಅರ್ಜಿ ಬಾಕಿ ಉಳಿಸಿಕೊಂಡವರ ಅಮಾನತುಜಿಲ್ಲೆಯಲ್ಲಿ ಪೌತಿ ಖಾತೆಗಾಗಿ ಸಲ್ಲಿಸಿದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡಿರುವ ಗ್ರಾಮ ಲೆಕ್ಕಾಧಿಕಾರಿ, ಹಾಗೂ ಉಪ ತಹಸೀಲ್ದಾರ್‌ರನ್ನು ಕೂಡಲೇ ಅಮಾನತು ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆಗೆ ನಿರ್ದೇಶನ ನೀಡಿದರು.