ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶಾಂತಿಯುತ ಮತದಾನಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.