ಕೆಡಿಪಿ ಸಭೆಯ ಲಿಂಕ್ ತಪ್ಪಿಸಿದ ಹೇಮಾವತಿ ಕೆನಾಲ್ಕಳೆದ 2 ತಿಂಗಳಿನಿಂದ ಜಿಲ್ಲೆಯಾದ್ಯಂತ ಸಂಚಲನ ಮೂಡಿಸುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ವಿಷಯ ತುಮಕೂರು ಜಿ.ಪಂ ಕೆಡಿಪಿ ಸಭೆಯಲ್ಲಿ ರಿಂಗಣಿಸಿತು.ಹೇಮಾವತಿ ವಿಷಯಕ್ಕೆ ಸಂಬಂಧಿಸಿದಂತೆ ಜಿ.ಪಂ. ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ನಡುವೆ ಜಟಾಪಟಿ ನಡೆದು ಕೋಲಾಹಲಕ್ಕೆ ಕಾರಣವಾಯಿತು.