ಮಧುಗಿರಿಯಲ್ಲಿ ಹಾಲಿನ ಪೌಡರ್ ಪ್ಲಾಂಟ್ ಘಟಕ ಸ್ಥಾಪಿಸಲು ಕ್ರಮ: ಎಂಎಲ್ಸಿ ಆರ್.ರಾಜೇಂದ್ರತುಮುಲ್ ಅಧ್ಯಕ್ಷ ಸ್ಥಾನವು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿಂದುಳಿದ ವರ್ಗದ ಪಾವಗಡ ಶಾಸಕ ವೆಂಕಟೇಶ್ ಅವರನ್ನು ತುಮುಲ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಆ ನಿಟ್ಟಿನಲ್ಲಿ ಅಧ್ಯಕ್ಷ ವೆಂಕಟೇಶರವರಿಗೆ ನಮ್ಮ ಜಿಲ್ಲೆಯ ರೈತರ, ಕೃಷಿಕರ ಹಾಗೂ ಕೂಲಿ ಕಾರ್ಮಿಕರ ಪರ ಕೆಲಸ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಸಲಹೆ ನೀಡಿದರು.