ಮಕ್ಕಳ ರಕ್ಷಣೆ ಎಲ್ಲ ಇಲಾಖೆಯ ಜವಾಬ್ದಾರಿ: ಡಾ.ಕೆ.ಟಿ.ತಿಪ್ಪೇಸ್ವಾಮಿಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಇಂತಹ ಪ್ರಕರಣಗಳು ನಡೆಯದಂತೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು. ಶಾಲೆ ಬಿಟ್ಟ ಮಕ್ಕಳ ಸರ್ವೆ ಮಾಡಿಸಿ ಪುನಃ ಶಾಲೆಗೆ ಸೇರಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪ್ರತಿ ವಾರಕ್ಕೊಂದು ಬಾರಿ ಪೊಲೀಸ್ ಠಾಣೆಗೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಪ್ರತಿ ಶಾಲೆಗಳಲ್ಲಿ ಸಲಹಾ ಪೆಟ್ಟಿಗಳನ್ನು ಇಡಬೇಕು.