ಲಿಂಕ್ ಕೆನಾಲ್ ನಿಂದ ಹೇಮಾವತಿ ನೀರಿಗೆ ಕುತ್ತು: ರೈತಸಂಘದ ಎ.ಗೋವಿಂದರಾಜುಹೇಮಾವತಿ ಲಿಂಕ್ ಕೆನಾಲ್‌ನಿಂದ ಜಿಲ್ಲೆಯ ಹೇಮಾವತಿ ನೀರಿಗೆ ಕುತ್ತು ಬರಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಲಿಂಕ್ ಕೆನಾಲ್ ವಿರುದ್ದ ಧ್ವನಿ ಎತ್ತುವಂತೆ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ತುಮಕೂರಿನಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.