ಅಚ್ಚೆ ದಿನ್ ಕಲ್ಪಿಸುವಲ್ಲಿ ನರೇಂದ್ರಮೋದಿ ಸಂಪೂರ್ಣ ವಿಫಲ: ಮಾವಳ್ಳಿ ಶಂಕರ್ನರೇಂದ್ರಮೋದಿ ನೇತೃತ್ವದ 10ವರ್ಷಗಳ ಎನ್.ಡಿ.ಎ ಆಡಳಿತ ಜನಸಾಮಾನ್ಯರಿಗೆ ಅಚ್ಛೇ ದಿನ್ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತ, ಬಡವರ, ದೀನ ದಲಿತರು, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.