ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆತುಮಕೂರು ತಾಲೂಕಿನ ಬುಗುಡನಹಳ್ಳಿ, ಬೆಳ್ಳಾವಿ, ಹೊಳಕಲ್ಲು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಪೂರೈಸುವಂತೆ ಮತ್ತು ಅಡಚಣೆಯಿಲ್ಲದೆ ನಿರಂತರವಾಗಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.