ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.